ದಕ್ಷಿಣ ಕನ್ನಡ ಜಿಪಂ ಮಾಜಿ ಅಧ್ಯಕ್ಷ ಸದಾನಂದ ಪೂಂಜ ನಿಧನ

sadananda poonja
Published on

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕ, ಸಜೀಪ ಮೂಡ ಗ್ರಾಮದ ಸಮಗ್ರ ಅಭಿವೃದ್ಧಿಯ ರುವಾರಿ ಬರಂಗರೆ ಸದಾನಂದ ಪೂಂಜ(೮೦) ಅಸೌಖ್ಯದಿಂದ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸಜೀಪ ಮಾಗಣೆಯ ಆಡಳಿತದಾರರಾಗಿದ್ದ ಅವರು ಸಜೀಪ ಮೂಡ ಗ್ರಾಮ ಪಂಚಾಯಿತಿಯ ಮಂಡಲ ಪ್ರಧಾನರಾಗಿ ಹಾಗೂ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದ ಅವರು ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಸುಭಾಶ್ ಯುವಕ ಮಂಡಲ ಹಾಗೂ ಶಾರದೋತ್ಸವ ಸಮಿತಿ ಸ್ಥಾಪಕಾಧ್ಯಕ್ಷರಾಗಿದ್ದರು. ಸಜೀಪ ಮೂಡದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಾಲೂಕು ಬೋರ್ಡ್ ಉಪಾಧ್ಯಕ್ಷರಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾಗಿದ್ದ ಅವರು ಈಶ್ವರ ಮಂಗಲ ದೇವಸ್ಥಾನದ ಉತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net