ಜಾಬಿನ್ ಕಾಲೇಜಿನಲ್ಲಿ ಸಂಸ್ಥಾಪನ ದಿನ,  ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿ

IMG_20241113_204542_273.jpg
Published on

ಹುಬ್ಬಳ್ಳಿ: ಕನಿಷ್ಠ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿದರೆ ಆ ಮೂಲಕ ಅನೇಕ ರೋಗಿಗಳಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ. ವಿಠ್ಠಲ ಮಾನೆ ಹೇಳಿದರು.

ಇಲ್ಲಿಯ ಪಿ.ಸಿ. ಜಾಬಿನ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕೆಎಲ್ಇ 109ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ರಕ್ತದಾನ ಮಾಡುವುದರಿಂದ ಯುವಕರ ಆರೋಗ್ಯವೂ ಉತ್ತಮಗೊಳ್ಳುತ್ತದೆ ಎಂದು ಸಲಹೆ ನೀಡಿದರು.

ಸಂಸ್ಥಾಪನಾ ದಿನದ ಪ್ರಯುಕ್ತ ಕಾಲೇಜಿನಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. 62 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಸಪ್ತರ್ಷಿಗಳು, ಮಹಾಪೋಷಕರು ಹಾಗೂ ದಾನಿಗಳ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು.

ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ಜಯದೀಪ ಅವರು ರಕ್ತದಾನಿಗಳನ್ನು ಪ್ರಶಂಸಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಎಲ್.ಡಿ. ಹೊರಕೇರಿ, 1916ರ ನ. 13ರಂದು ಸಪ್ತಷಿರ್ಗಳಿಂದ ಪ್ರಾರಂಭವಾದ ಕೆಎಲ್ಇ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು 310 ಅಂಗಸಂಸ್ಥೆಗಳನ್ನು ಹೊಂದಿದೆ. ಶಿಣದ ಎಲ್ಲ ಕ್ಷೇತ್ರಗಳಲ್ಲಿ ಹರಡಿಕೊಂಡಿದೆ ಎಂದರು.

ಡಾ. ಪ್ರಭಾಕರ ಟಿ., ಡಾ. ಸುಧಾ ಪಾಟೀಲ, ಸುಮಂಗಲಾ ಪಾಟೀಲ, ವೈ.ಆರ್.ಸಿ. ಮತ್ತು ಎನ್ಸಿಸಿ, ಎನ್ಎಸ್ಎಸ್ ಮತ್ತು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net