ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

15-09-Shiva-3
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಶುಕ್ರವಾರ ಅಂಬೇಡ್ಕರ್, ಇಂದಿರಾಗಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂವಿಧಾನ ಪೀಠಿಕೆ ಪಠಣ ಮಾಡಲಾಯಿತು. ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುಳಾ, ಉಪಾಧ್ಯಕ್ಷೆ ಖಾಸಿಂಬೀ, ಪದಾಕಾರಿಗಳಾದ ರಾಣಿ ರಿಚರ್ಡ, ರಜೀಯಾ ಪಟೇಲ್, ಲಕ್ಷ್ಮಿ, ಜಹೀದಾ ಬೇಗಂ ಇದ್ದರು.
Published on

ರಾಯಚೂರು: ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ 40ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಶುಕ್ರವಾರ ಮಹಿಳಾ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಪೀಠಿಕೆಯನ್ನು ಪಠಣ ಮಾಡಲಾಯಿತು.
ಪಕ್ಷದ ಹಿರಿಯ ಮುಖಂಡೆ ರಾಣಿ ರಿಚರ್ಡ್ ಧ್ವಜಾರೋಹಣ ನೆರವೇರಿಸಿದ ನಂತರ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುಳಾ, ಉಪಾಧ್ಯಕ್ಷೆ ಖಾಸಿಂಬೀ, ಪದಾಕಾರಿಗಳಾದ ರಜೀಯಾ ಪಟೇಲ್, ಲಕ್ಷ್ಮಿ, ಜಹೀದಾ ಬೇಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net