

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಆವರಣದಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಹಾಗೂ ವೈದ್ಯರ ಮತ್ತು ದಾದಿಯರ ವಸತಿ ಗೃಹಗಳ ದುರಸ್ತಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಶಂಕು ಸ್ಥಾಪನೆ ನಡೆಸಿದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಜನರಿಗೆ ಸಕಾಲಕ್ಕೆ ಉತ್ತಮ ಚಿಕಿತ್ಸೆ ನೀಡಬೇಕೆಂದು. ವ್ಯೆದ್ಯರ ಕೆಲಸ ಮಹತ್ವವಾದದ್ದು. ಅವರಿಗೆ ಗೌರವ ನೀಡಬೇಕು. ಬೆಳಗಿನ ಸಮಯದಲ್ಲಿ ಸಾರ್ವಜನಿಕರಿಗೆ ತಡವಾಗಿ ವ್ಯೆದ್ಯರ ಚಿಕಿತ್ಸೆ ಸಿಗುತ್ತಿದೆ ಎಂಬ ದೂರಿದೆ. ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಉಪವಿಭಾಗ ಆಸ್ಪತ್ರೆಯಾದ್ದರಿಂದ ರೋಗಿಗಳ ಸಂಖ್ಯೆ ಹೆಚ್ಚಿರುತ್ತದೆ. ವ್ಯೆದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿ ಅವಶ್ಯಕತೆ ಇತ್ತು. ಇದೀಗ ಹಂತ ಹಂತವಾಗಿ ಸಮಸ್ಯೆಗಳು ಸರಿಯಾಗುತ್ತಿದೆ ಎಂದರು.
ನಗರಸಭೆ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಡಿಎಚ್‌ಒ ಡಾ.ಚಿದಂಬರ, ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಮುಖ್ಯ ಆಡಳಿತ ಅಧಿಕಾರಿ ಡಾ.ರಾಜಶೇಖರ್, ನಗರಸಭೆ ಪೌರಾಯುಕ್ತ ರಮೇಶ್, ಎಇಇ ಅಂಬರೀಷ್, ಇರ್ಫಾನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪರಮೇಶ್, ಕೃಷ್ಣವೇಣಿ, ಕುಮಾರಸ್ವಾಮಿ, ಗುತ್ತಿಗೆದಾರ ವಿಶ್ವನಾಥ್, ನಗರಸಭೆ ಸದಸ್ಯರು ಮತ್ತಿತರಿದ್ದರು.