ರೈತ ಸಂಪರ್ಕ ಕೇಂದ್ರಕ್ಕೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

Foundation Laying of Center of Excellence Mandya
Published on

ಮಂಡ್ಯ: ಕೃಷಿ ಇಲಾಖೆಯ ವಿವಿಧ ಕೆಲಸಗಳ ನಿರ್ವಹಣೆಗಾಗಿ ಮಂಡ್ಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ 2 ಕೋಟಿ ರೂ ವೆಚ್ಚದ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರ ಪ್ರಾರಂಭಿಸಲು ಶಂಕುಸ್ಥಾಪನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೈತ ಸಂಪರ್ಕ ಕೇಂದ್ರಕ್ಕೆ ಸರ್ಕಾರಿ ಕಟ್ಟಡ ನಿರ್ಮಿಸಲು ಸರ್ಕಾರ ಅನುದಾನವನ್ನು ಒದಗಿಸಲಿದೆ. ಜಿಲ್ಲೆಯ 7 ತಾಲೂಕಿನಲ್ಲೂ ಕೃಷಿ ನಿರ್ದೇಶಕರ ಕಚೇರಿ ನಿರ್ಮಿಸುವುದು ನಮ್ಮ ಉದ್ದೇಶ. ಇದಕ್ಕೆ ಆಯಾಯ ಕ್ಷೇತ್ರದ ಶಾಸಕರು ಸ್ಥಳವನ್ನು ಹುಡುಕಿ ನಿಗದಿಪಡಿಸಬೇಕು. ತಹಸೀಲ್ದಾರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸಹಕಾರದೊಂದಿಗೆ ಕಚೇರಿ ನಿರ್ಮಿಸಲು ಸ್ಥಳ ಗುರುತಿಸಬೇಕು ಎಂದರು.

ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಮಂಡ್ಯ ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಜಂಟಿ ಕೃಷಿ ನಿರ್ದೇಶಕ ಡಾ.ವಿ.ಎಸ್.ಅಶೋಕ್, ಸಹಾಯಕ ಕೃಷಿ ನಿರ್ದೇಶಕಿ ಸುನೀತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net