ಪುದುವಿನಲ್ಲಿ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ

New Project (40)
Published on

ಬಂಟ್ವಾಳ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅನುದಾನದ 5 ಲಕ್ಷ ರೂ. ಹಾಗೂ ಪುದು ಪಂಚಾಯಿತಿಯ 5 ಲಕ್ಷ ರೂ. ಅನುದಾನದಲ್ಲಿ, ತಾಲೂಕಿನ ಪುದು ಗ್ರಾಮದ ಕುಮ್ಡೇಲ್ ಸರ್ಕಾರಿ ಶಾಲಾ ಬಳಿಯಿಂದ ಶ್ರೀ ಕೊರ್ದಬ್ಬು ದೈವಸ್ಥಾನದವರೆಗೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶ್ರೀ ಕೋರ್ದಬ್ಬು ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ ಚೌಟ ಶಿಲಾನ್ಯಾಸ ನೆರವೇರಿಸಿದರು.

ಬಿಜೆಪಿ ಮಂಗಳೂರು ಮಂಡಲದ ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಹಿಂದುಳಿದ ವರ್ಗಗಳ ಮಂಡಲ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಸುಜೀರು, ಪುದು ಶಕ್ತಿಕೇಂದ್ರದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ಕಾರ್ಯದರ್ಶಿ ಸುಕೇಶ್ ತೇವು, ಪುದು ಗ್ರಾ.ಪಂ. ಸದಸ್ಯ ಸೋಮನಾಥ, ಸದಸ್ಯೆ ವಿದ್ಯಾ ಶೇಖರ್, ಶಾಂತ ಚೌಟ, ವಿಠ್ಠಲ್ ಸಾಲಿಯಾನ್, ಮಾಜಿ ಸದಸ್ಯ ಸಂತೋಷ್ ಕುಮಾರ್ ನೆತ್ತರಕೆರೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಮುಖರಾದ ಪ್ರಕಾಶ್ಚಂದ್ರ ರೈ ದೇವಸ್ಯ, ಐತಪ್ಪ ಆಳ್ವ ಸುಜೀರುಗುತ್ತು, ಉಮೇಶ್ ಸಾಲ್ಯಾನ್ ಬೆಂಜನಪದವು, ಚಂದ್ರಶೇಖರ ಗಾಂಭೀರ ಸುಜೀರುಗುತ್ತು, ರಾಧಾಕೃಷ್ಣ ತಂತ್ರಿ ಬೆಂಜನಪದವು, ಉಮೇಶ್ ಶೆಟ್ಟಿ ಬರ್ಕೆ, ಸಂತೋಷ್ ಕುಲಾಲ್ ನೆತ್ತರಕೆರೆ, ಜಗದೀಶ್ ಕಡೆಗೋಳಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net