ದೇವಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ : ಅಶೋಕ್ ಕುಮಾರ್ ರೈ ಮಾಹಿತಿ

New Project (31)
Published on

ಪುತ್ತೂರು ಗ್ರಾಮಾಂತರ: ವರ್ಷದ ಹಿಂದೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಭಾಭವನ ನಿರ್ಮಾಣಕ್ಕೆ ಅನುದಾನ ಒದಗಿಸಬೇಕೆಂಬ ಭಕ್ತರ ಮನವಿಗೆ ಸ್ಪಂದಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ 15 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ಈಗಾಗಲೇ 10 ಲಕ್ಷ ರೂ. ದೇವಳದ ಖಾತೆಗೆ ಜಮೆ ಆಗಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಗ್ರಾಮಸ್ಥರು, ಭಕ್ತರ ಸಹಕಾರ ಅಗತ್ಯ ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಆರ್ಯಾಪು ಗ್ರಾಮದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಸಭಾಭವನ ನಿರ್ಮಾಣಕ್ಕೆ ಶಿಲಾನ್ಯಾಸಗೈದು ಮಾತನಾಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಜ್ವಲ್ ರೈ ತೊಟ್ಲ, ಪವಿತ್ರ ರೈ, ಹರಿಶ್ಚಂದ್ರ ಉದ್ಯಂಗಳ, ಯಾಧವಕೃಷ್ಣ ಗೌಡ, ಪೂರ್ಣಿಮ ರೈ, ಅರ್ಚಕ ಸೂರ್ಯನಾರಾಯಣ ಭಟ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಮತ್ತಿತರರು ಇದ್ದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಭಾಗದಲ್ಲಿ ಗುಡ್ಡ ಕುಸಿತದಿಂದಾಗಿ 125 ಮನೆಗಳು ಅತಂತ್ರ ಸ್ಥಿತಿಯಲ್ಲಿದ್ದು, ಈ ಹಿಂದೆ ತಡೆಗೋಡೆ ನಿರ್ಮಾಣ ಕಾಮಗಾರಿಗೆಂದು ತೆಂಗಿನಕಾಯಿ ಹೊಡೆದು ಹೋದವರು ಮರಳಿ ಅಲ್ಲಿಗೆ ಬಂದಿರಲಿಲ್ಲ. ಈ ವಿಚಾರ ಕಳೆದ ಚುನಾವಣಾ ಸಂದರ್ಭದಲ್ಲಿ ನನ್ನ ಗಮನಕ್ಕೆ ಬಂದಿತ್ತು. ಅಂದು ಅಲ್ಲಿನ ಮಂದಿಗೆ ನೀಡಿದ ಭರವಸೆಯಂತೆ ತಡೆಗೋಡೆ ನಿರ್ಮಾಣಕ್ಕಾಗಿ 2 ಕೋಟಿ ರೂ. ಅನುದಾನ ಒದಗಿಸುವ ಕೆಲಸ ಮಾಡಿದ್ದೇನೆ. ಮುಂದಿನ 15 ದಿನಗಳೊಳಗೆ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು ಸಮಸ್ಯೆಗೆ ಪರಿಹಾರ ಸಿಗಲಿದೆ. ಅಶೋಕ್‌ಕುಮಾರ್ ರೈ, ಶಾಸಕರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net