ಅಗ್ನಿಶಾಮಕ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ

4 DND 1
Published on

ದಾಂಡೇಲಿ: ಅಂಬೇವಾಡಿಯಲ್ಲಿ ನಿರ್ವಣವಾಗಲಿರುವ ನೂತನ ಅಗ್ನಿಶಾಮಕ ಠಾಣೆಯ ಕಟ್ಟಡಕ್ಕೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮುದಾಯ ಭವನಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಇತ್ತೀಚೆಗೆ ಶಂಕು ಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ದಾಂಡೇಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅಗ್ನಿ ಅವಘಡಗಳನ್ನು ತಡೆಯಲು ಅಗ್ನಿಶಾಮಕ ಠಾಣೆ ಅವಶ್ಯವಾಗಿರುವುದನ್ನು ಮನಗಂಡು 3 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ವಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಮಂಗಳೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ ಮಾತನಾಡಿ, 11 ತಿಂಗಳ ಒಳಗಡೆ ಇಲ್ಲಿ ಅಗ್ನಿಶಾಮಕ ಠಾಣೆಯ ಕಟ್ಟಡ ನಿರ್ವಣಗೊಳ್ಳಲಿದೆ ಎಂದರು.

ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣ ಅಧಿಕಾರಿ ಜಿ.ಸತೀಶ ಮಾತನಾಡಿದರು. ಅಗ್ನಿಶಾಮಕ ಅಧಿಕಾರಿ ರಾಜು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ ಕುಮಾರ, ಕೆಆರ್​ಡಿಎಲ್ ಸಹಾಯಕ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ನವೀನ, ನಗರಸಭೆ ಅಧ್ಯಕ್ಷ ಅಷ್ಪಾಕ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೋಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ರಾಮಲಿಂಗ ಜಾಧವ, ಪೌರಾಯುಕ್ತ ವಿವೇಕ ಬನ್ನೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಸುಜಾತಾ ಖಡತರೆ ಇದ್ದರು. ನಿಲಯ ಪಾಲಕ ಚಿದಾನಂದ ಚಿಕ್ಕೊಪ್ಪ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net