

ಚಿಂತಾಮಣಿ: ತಾಲೂಕು ಆಡಳಿತ, ತಾಪಂ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ 16.63 ಕೋಟಿ ರೂ. ವೆಚ್ಚದ 50 ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕ ಕಟ್ಟಡ ನಿರ್ಮಾಣ ಕಾಮಗಾರಿಗೆ ಏ.10ರ ಗುರುವಾರ ಸಂಜೆ 4 ಗಂಟೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕ ಡಾ.ಎಂ.ಸಿ. ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೋಲಾರ ಸಂಸದ ಎಂ.ಮಲ್ಲೇಶ್‌ಬಾಬು ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ.ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಅರ್.ಜಗನ್ನಾಥ್ ಮತ್ತಿತರರು ಭಾಗವಹಿಸಲಿದ್ದಾರೆ.