ಮುಜುಂಗಾವು ವಿದ್ಯಾಪೀಠದ ಸಭಾಭವನಕ್ಕೆ ಶಿಲಾನ್ಯಾಸ

13
Published on

ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠ 24 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಪ್ರಯುಕ್ತ ಶಾಲೆಯ ನೂತನ ಸಭಾಭವನದ ಕಟ್ಟಡಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕೋಣಮ್ಮೆ ಮಹಾದೇವ ಭಟ್ಟರ ನೇತೃತ್ವದಲ್ಲಿ ಬುಧವಾರ ನೆರವೇರಿತು.

ಮುಂಡಪ್ಪಳ್ಳ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ರಜತೋತ್ಸವ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿದ್ದರು. ಮುಳ್ಳೇರಿಯ ಹವ್ಯಕ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಹವ್ಯಕ ಅಭ್ಯುದಯ ಟ್ರಸ್ಟ್‌ನ ಪ್ರಾರಂಭಿಕ ಸದಸ್ಯ ಎಚ್.ಶಿವರಾಮ ಭಟ್ ಕಾರಿಂಜ ಹಳೆಮನೆ, ಹವ್ಯಕ ಮಹಾಮಂಡಲ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಹವ್ಯಕ ಕುಂಬಳೆ ವಲಯಾಧ್ಯಕ್ಷ ಡಾ.ಡಿ.ಪಿ ಭಟ್ ಕುಂಬಳೆ, ಹವ್ಯಕ ಮುಳ್ಳೇರಿಯ ಮಂಡಲ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆರೆಮೂಲೆ ಉಪಸ್ಥಿತರಿದ್ದರು. ಆಡಳಿತ ಸಮಿತಿ ಜತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಶಾಮ್ ಭಟ್ ದರ್ಬೆಮಾರ್ಗ ಪ್ರಸ್ತಾವಿಸಿದರು. ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಪೆರಡಾನ ನಿರೂಪಿಸಿದರು. ರಜತೋತ್ಸವ ಸಮಿತಿ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ ಶೇಡಿಗುಮ್ಮೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net