ಗಜೇಂದ್ರಗಡದಲ್ಲಿ ನ್ಯಾಯಾಲಯಕ್ಕೆ ಶಂಕುಸ್ಥಾಪನೆ 16ರಂದು

11 GJD 3
Published on

ಗಜೇಂದ್ರಗಡ: ಪಟ್ಟಣದಲ್ಲಿ ನ. 16ರಂದು ನೂತನ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದಕ್ಕೂ ಮೊದಲು ಪಟ್ಟಣದ ನ್ಯಾಯಾಲಯದಲ್ಲಿ ಅಧಿಕಾರಿಗಳು ಮತ್ತು ವಕೀಲರೊಂದಿಗೆ ಸಭೆ ನಡೆಸಿದರು.

ಬಳಿಕ ನ್ಯಾಯಾಲಯ ಕಟ್ಟಡಕ್ಕೆ ನಿಗದಿ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಅಲ್ಲದೆ, ಶಂಕುಸ್ಥಾಪನೆ ದಿನದಂದು ವೇದಿಕೆ, ಆಸನದ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಸೇರಿ ಹಲವು ವಿಷಯಗಳ ಕುರಿತು ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಚರ್ಚೆ ನಡೆಸಿದರು.

ರೋಣ ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಎಸ್. ಬಂಗಾರಿ ಮಾತನಾಡಿ, ಪಟ್ಟಣದ ಹೊರವಲಯದ ಕಾಲಕಾಲೇಶ್ವರ ರಸ್ತೆಯಲ್ಲಿ ರಾಜೂರ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಗೆ ಒಳಪಡುವ (ರಿ.ಸ.ನಂ.107/2ಬಿ) ಜಾಗೆಯಲ್ಲಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ನೂತನ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನೆಯನ್ನು ನ. 16ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ ಎಂದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಗದಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ವಿ. ಶ್ರೀಶಾನಂದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಜಿ.ಎಸ್. ಪಾಟೀಲ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಎಸ್. ಮಿಟ್ಟಲಕೊಡ, ಜಿಲ್ಲಾಧಿಕಾರಿ ಗೋವಿಂದರಡ್ಡಿ, ರೋಣ-ಗಜೇಂದ್ರಗಡ ಪ್ರಧಾನ ದಿವಾಣಿ ನ್ಯಾಯಾಧೀಶರಾದ ಆದಿತ್ಯ ಕಲಾಲ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ರೋಣ-ಗಜೇಂದ್ರಗಡ ಪ್ರಧಾನ ದಿವಾಣಿ ನ್ಯಾಯಾಧೀಶ ಆದಿತ್ಯ ಕಲಾಲ, ಹಿರಿಯ ದಿವಾಣಿ ನ್ಯಾಯಾಧೀಶ ಎನ್. ಚಿನ್ನಸ್ವಾಮಿ, ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ಪಿಎಸ್​ಐ ಸೋಮನಗೌಡ ಗೌಡ್ರ, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ರಾಜೂರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜು ಗಾರಗಿ, ವಕೀಲರಾದ ಎಂ.ಎಚ್. ಕೋಲಕಾರ, ಎಂ.ವೈ. ಅವಧೂತ, ಸಿದ್ದು ಹಿಡಕಿಮಠ, ಬಿ.ಎಂ. ಸಜ್ಜನರ, ವಿ.ಆರ್. ಗುಡಿಸಾಗರ, ಆರ್.ಎಂ. ರಾಯಬಾಗಿ, ಬಾಲು ರಾಠೋಡ, ಪೀರು ರಾಠೋಡ, ವಿ.ಎಸ್. ರಾಜೂರ, ಫಯಾಜ್ ತೋಟದ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net