

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಎಸ್ಡಿಎಂ ವೈದ್ಯಕಿಯ ಕಾಲೇಜಿನಲ್ಲಿ ವಿಶ್ವ ವಿದ್ಯಾಲಯದ ಕುಲಪತಿ ಡಾ. ಡಿ. ವೀರೇಂದ್ರ ಹೆಗ್ಗಡೆ ಜನ್ಮದಿನ ನಿಮಿತ್ತ ಸಂಸ್ಥಾಪಕರ ದಿನವನ್ನು ಸೋಮವಾರ ಆಚರಿಸಲಾಯಿತು.
ಎಸ್ಡಿಎಂ ವಿವಿ ಉಪ ಕುಲಪತಿ ಡಾ. ನಿರಂಜನ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರ ಜೀವನ ಮತ್ತು ಸಾಧನೆಗಳ ಮಾಹಿತಿ ನೀಡಿದರು.
ವೀರೇಂದ್ರ ಹೆಗ್ಗಡೆ ಅವರು ಆನ್ಲೈನ್ ಮೂಲಕ ವಿಶ್ವ ವಿದ್ಯಾಲಯದ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿದರು. ಕಾರ್ಯ ನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿ ವಿ. ಜೀವಂಧರ್ ಕುಮಾರ, ಕುಲಸಚಿವ ಡಾ. ಚಿದೇಂದ್ರ ಶೆಟ್ಟರ್, ಹಣಕಾಸು ಅಧಿಕಾರಿ ವಿ.ಜಿ. ಪ್ರಭು, ಡಾ. ರತ್ನಮಾಲಾ ದೇಸಾಯಿ, ಇತರರು ಇದ್ದರು.
ಇದೇ ಸಮಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು. ಡಾ. ಎಲ್.ಪಿಳ್ಳೆ ಸ್ವಾಗತಿಸಿದರು. ಪ್ರೊ. ರೇಣುಕಾರಾಧ್ಯ ಮಠ ನಿರೂಪಿಸಿದರು. ಡಾ. ಸಂಜಯ ಪರಮಾರ ವಂದಿಸಿದರು.