ಮಹಿಳೆ ಕೊಲೆಗೆ ಯತ್ನಿಸಿದ್ದ ನಾಲ್ವರ ಬಂಧನ

crime
Published on

ಹುಬ್ಬಳ್ಳಿ: ಇಲ್ಲಿಯ ಬ್ಯಾಂಕರ್ಸ್ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿ, ನ್ಯಾಯಾಲಯ ವಶಕ್ಕೆ ಒಪ್ಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಅಭಿಷೇಕ ಬಿಲಾನಾ, ಸುವರ್ಣ ಜರೆ, ಅಭಿಷೇಕ ಶಿಕ್ಕಲಿಗಾರ, ಪ್ರಜ್ವಲ್ ಘೋಡಕೆ ಎಂಬುವವರನ್ನು ಬಂಧಿಸಿದ್ದಾರೆ.

ಹೆಗ್ಗೇರಿಯ ಅಭಿಷೇಕ ಬ್ಯಾಂಕರ್ಸ್ ಕಾಲನಿಯ ಪಲ್ಲವಿ ಹಾಗೂ ಸುವರ್ಣಾ ಎಂಬುವವರಿಗೆ ಫೈನಾನ್ಸ್ ಮಾಡಿದ್ದ. ಈ ನಡುವೆ ಸುವರ್ಣಾ ಎಂಬ ಮಹಿಳೆ ಜತೆ ಅಭಿಷೇಕ ಅತಿಯಾದ ಸಲುಗೆ ಬೆಳೆಸಿದ್ದ. ಹೀಗಾಗಿ ಇವರಿಬ್ಬರ ವಿಚಾರವನ್ನು ಪಲ್ಲವಿ, ಸುವರ್ಣಾ ಮನೆಯವರಿಗೆ ತಿಳಿಸಿದ್ದಳು. ಪಲ್ಲವಿಗೆ ಬುದ್ದಿ ಕಲಿಸಬೇಕೆಂದು ಸುವರ್ಣಾ ಹಾಗೂ ಅಭಿಷೇಕ್ ಪ್ಲಾೃನ್ ಮಾಡಿ ಅಭಿಷೇಕ ತನ್ನ ಇಬ್ಬರು ಸ್ನೇಹಿತರಾದ ಅಭಿಷೇಕ ಹಾಗೂ ಪ್ರಜ್ವಲ್ ಎಂಬುವರಿಂದ ಮಚ್ಚನ್ನು ತರಿಸಿ ಪಲ್ಲವಿ ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ್ದರ ಕುರಿತು ಪ್ರಕರಣ ದಾಖಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net