ಅಕ್ರಮ ಜಾನುವಾರು ಸಾಗಿಸುತ್ತಿದ್ದ ನಾಲ್ವರ ಸೆರೆ

Crime Logo
Published on

ಭಟ್ಕಳ: ತಾಲೂಕಿನಲ್ಲಿ ಮತ್ತೆ ಅಕ್ರಮ ಜಾನುವಾರು ಸಾಗಾಟ ಪತ್ತೆಯಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯ ತಂಡ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಮದಿನಾ ಕಾಲನಿಯ ಅಬೂಬಕ್ಕರ್ ಗಂಗಾವಳಿ, ಕೇರಳದ ಕಾಸರಗೋಡಿನ ಹಮೀದ್, ಉತ್ತರ ಪ್ರದೇಶದ ಆಸಿಪ್, ಹೈದರಾಬಾದ್​ನ ಶಾಹುಲ್ ಹಮೀದ್ ಕೆ. ಬಂಧಿತರು.

ಕೇರಳದಿಂದ ಭಟ್ಕಳ ಹನೀಫಾಬಾದ್ ಕಡೆಗೆ ಸಾಗಿಸುತ್ತಿದ್ದ ಕಂಟೇನರ್ ಅನ್ನು ಪೊಲೀಸರು ಹನೀಫಾಬಾದ್ ಪಿ.ಬಿ. ಇಬ್ರಾಹಿಂ ಪೆಟ್ರೋಲ್ ಬಂಕ್ ಹತ್ತಿರ ವಶಕ್ಕೆ ಪಡೆದಿದ್ದಾರೆ. ಯಾವುದೇ ಪರವಾನಗಿ ಇಲ್ಲದೇ, ನೀರು ಹುಲ್ಲು ಕೊಡದೇ, ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು ಎಂಬುದು ತಿಳಿದುಬಂದಿದೆ.

ಸಿಪಿಐ ಮಂಜುನಾಥ ಅಂಗಾರೆಡ್ಡಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net