ಗರಗ ಕೊಲೆ ಪ್ರಕರಣದ ನಾಲ್ವರ ಬಂಧನ

3 Dwd 7 (Girish Karadigudda)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಗರಗ ಗ್ರಾಮದಲ್ಲಿ ಡಿ. 3ರಂದು ನಡೆದಿದ್ದ ಗಿರೀಶ ಮಹದೇವಪ್ಪ ಕರಡಿಗುಡ್ಡ (49) ಎಂಬಾತನ ಕೊಲೆ ಪ್ರಕರಣವನ್ನು ಗರಗ ಠಾಣೆ ಪೊಲೀಸರು ಭೇದಿಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ ಆರೋಪದಡಿ ಅದೇ ಗ್ರಾಮದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆಯ ದೃಷ್ಟಿಯಿಂದ ಪೊಲೀಸರು ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net