

ಮೈಸೂರು: ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿದ ವನ್ಯಜೀವಿಗಳ ಕುರಿತ ನಾಲ್ಕು ಪುಸ್ತಕಗಳು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಆಶ್ರಯದಲ್ಲಿ ಮೇ 9ರಂದು ಬಿಡುಗಡೆಯಾಗಲಿದೆ.
ಮೈಸೂರು ಕಲ್ಚರಲ್ ಅಸೋಸಿಯೇಶನ್, ಬೆಂಗಳೂರಿನ ಅಕ್ಷರ ಮಂಟಪ ಪಬ್ಲಿಕೇಷನ್ ಸಹಯೋಗದಲ್ಲಿ ಅಂದು ಬೆಳಗ್ಗೆ 10.30ಕ್ಕೆ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಐತಿಚಂಡ ರಮೇಶ್ ಉತ್ತಪ್ಪ ಅವರ ‘ಕಾಡು ಹೇಳಿದ ಕಥೆ, ‘ಹಾವು, ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ, ‘ಆನೆ, ಬದಲಾದ ವರ್ತನೆ, ‘ಅರ್ಜುನ, ನಿನ್ನ ಮರೆಯಲೆಂತು ನಾ ಕೃತಿಗಳು ಬಿಡುಗಡೆಯಾಗಲಿವೆ.
ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಉದ್ಘಾಟಿಸಲಿದ್ದಾರೆ. ವಿಜಯವಾಣಿ ಪತ್ರಿಕೆ ಸಂಪಾದಕ ಕೆ.ಎನ್.ಚನ್ನೇಗೌಡ, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ರವಿಂದ್ರ ಭಟ್, ಸುದರ್ಶನ ಚನ್ನಂಗಿಹಳ್ಳಿ, ರವಿ ಹೆಗಡೆ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ.
ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರು ವಿಶೇಷ ಅತಿಥಿಯಾಗಿ ಆಗಮಿಸುವರು. ಮೈಸೂರು ಕಲ್ಚರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್, ಪ್ರಕಾಶಕ ಚೇತನ್ ಕಣಬೂರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಮೈಸೂರಿನ ಹಿರಿಯ ವೈಲ್ಡ್ಲೈಫ್ ಛಾಯಾಗ್ರಾಹಕರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.