ಸಿಲಿಂಡರ್ ಸೋರಿಕೆಯಾಗಿ ನಾಲ್ವರಿಗೆ ಗಾಯ

crime
Published on

ಹುಬ್ಬಳ್ಳಿ: ಇಲ್ಲಿಯ ಶಕ್ತಿ ಕಾಲನಿಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ನಾಲ್ವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಕ್ರೀಡಾ ತರಬೇತುದಾರ ಮಹಾಂತೇಶ ಬಳ್ಳಾರಿ, ಪತ್ನಿ ದೈಹಿಕ ಶಿಕ್ಷಣ ಶಿಕ್ಷಕಿ ಗಂಗಮ್ಮ ಬಳ್ಳಾರಿ, ಮಕ್ಕಳಾದ ಮನೋರಂಜನ ಮತ್ತು ಕಾರುಣ್ಯ ಗಾಯಗೊಂಡಿದ್ದಾರೆ. ಗಂಗಮ್ಮ ಅವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರನ್ನೂ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಪ್ರಕಟರಣ ದಾಖಲಿಸಿಕೊಂಡಿರುವ ಅಶೋಕ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಅವಘಡ ಸ್ಥಳಕ್ಕೆ ಧಾವಿಸಿ ನಿಯಂತ್ರಣಕ್ಕೆ ತಂದಿದ್ದಾರೆ.

ಕೆಎಂಸಿಆರ್‌ಐಗೆ ಸಭಾಪತಿ ಬಸವರಾಜ ಹೊರಟ್ಟಿ, ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಕೆಎಂಸಿಆರ್‌ಐ ನಿರ್ದೇಶಕ ಡಾ. ಈಶ್ವರ ಹೊಸಮನಿ ಭೇಟಿ ನೀಡಿ, ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net