

ಕುಂದಾಪುರ: ಕೋಟೇಶ್ವರ ಗ್ರಾಮದ ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕೋಟೇಶ್ವರ ಕಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಕೋಟೇಶ್ವರ ನಿವಾಸಿ ಶ್ರೀಧರ (75)ಎಂಬುವರಿಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಚಲಿಸುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿ ಮುಂದೆ ಹಾಲಾಡಿ ಕಡೆಯಿಂದ ಕೋಟೇಶ್ವರ ಕಡೆಗೆ ಬರುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಾದಚಾರಿ ಶ್ರೀಧರ, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾ, ಕನ್ನಿಕಾ ಹಾಗೂ ರಿಕ್ಷಾ ಚಾಲಕನಿಗೆ ಗಾಯಗಳಾಗಿದ್ದು, ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.