ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು

death
Published on

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ.

ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮೃತಪಟ್ಟವರು.

ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ.

ವಾಮಂಜೂರು ಮೂಡುಶೆಡ್ಡೆ ನಿಖಿಲ್(18),ಅರ್ಶಿತಾ( 20), ವೇಣೂರಿನ ಸುಭಾಶ್(19), ಬಜ್ಪೆ ಪೆರಾರದ ರವಿ(30)ಮೃತಪಟ್ಟವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net