

ಉಡುಪಿ: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಲೋಕೋಪಯೋಗಿ ಇಲಾಖೆಯ ಎಸ್. ಎಚ್. ಡಿ. ಪಿ. ಯೋಜನೆಯಡಿ 10 ಕೋಟಿ ರೂ. ವೆಚ್ಚದಲ್ಲಿ ಉಡುಪಿ ಕ್ಷೇತ್ರದ ಗಡಿಭಾಗ ಕಳ್ತೂರುವರೆಗೆ ಚತುಷ್ಪಥ ರಸ್ತೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕರ್ಜೆ ಗ್ರಾಮದ ಅಪ್ರಿಕಟ್ಟೆ ಸೇತುವೆಯಿಂದ ಹೊಸೂರು ಶಾಲೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್, ಪ್ರಮುಖರಾದ ಸುರೇಶ್ ಶೆಟ್ಟಿ ತಡಾಲ್, ಧನಂಜಯ ಅಮೀನ್, ರಮೇಶ್ ಭಟ್ ಕರ್ಜೆ, ಪ್ರತಾಪ್ ಹೆಗ್ಡೆ ಮಾರಾಳಿ, ರಾಜೇಶ್ ಶೆಟ್ಟಿ ರ್ಬಿತಿ, ಆದರ್ಶ ಶೆಟ್ಟಿ ಕೆಂಜೂರು, ನರಸಿಂಹ ನಾಯ್ಕ್, ದಿನೇಶ್ ಕೆಂಜೂರು, ಹರೀಶ್ ಶೆಟ್ಟಿ ಚೇರ್ಕಾಡಿ, ಕಮಲಾಕ್ಷ ಹೆಬ್ಬಾರ್, ಮನೋಜ್ ಶೆಟ್ಟಿ ಸಂತೆಕಟ್ಟೆ, ಕಿಟ್ಟಪ್ಪ ಅಮೀನ್, ನವೀನ್ ಪುತ್ರನ್ ಕರ್ಜೆ, ಕಳ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಪೂಜಾರಿ, ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಪೂಜಾರಿ, ಗುತ್ತಿಗೆದಾರ ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.