

ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ಸೋಮವಾರ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದು, ವ್ಯಕ್ತಿಯೊಬ್ಬ ನನ್ನ ತಾಯಿ, ಪತ್ನಿ ಹಾಗೂ ಮಗನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಹಾಸನದ ಗೊರೂರೂ ಮೂಲದ ಚೇತನ್ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಮೃತರು.
ಸದರಿ ಅಪಾರ್ಟ್‌ಮೆಂಟ್‌ನ ಫ್ಲಾಟ್ ಒಂದರಲ್ಲಿ ಪ್ರಿಯಂವಧ ಶಪ ಪತ್ತೆಯಾಗಿದೆ. ಮತ್ತೊಂದು ಫ್ಲಾಟ್‌ನ ಹಾಲಿನಲ್ಲಿ ರೂಪಾಲಿ ಮತ್ತು ಕುಶಾಲ್ ಶವ ದೊರೆತ್ತಿದೆ. ಅದೇ ಫ್ಲಾಟ್‌ನ ರೂಮ್ ಒಂದರಲ್ಲಿ ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್‌ಸ್ಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ನಿಖರ ಕಾರಣ ಗೊತ್ತಾಗಿಲ್ಲ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.