ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು

IMG-20221027-WA0004
Published on

ಮುದ್ದೇಬಿಹಾಳ: ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವನ್ನಪ್ಪಿದ ಘಟನೆ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಕುಂಟೋಜಿ ಗ್ರಾಮದಲ್ಲಿ ಮನೆಗೆ ಹೊಂದಿಕೊಂಡು ಇರುವ ಹೊಲದಲ್ಲಿ ಕೆಲಸ ಮಾಡಿ ಮಲಗಿದ್ದಾಗ ಬೆಳಗಿನ ಜಾವ ಹಾವು ಕಚ್ಚಿದೆ ಎನ್ನಲಾಗಿದ್ದು ಇದರಿಂದ ತೀವ್ರ ಅಸ್ವಸ್ಥರಾಗಿದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಅವರನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಹೆಚ್ಚಿನ ಚಿಕಿತ್ಸೆಗೆಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಂದಾಯ ನಿರೀಕ್ಷಕ ಭೇಟಿ: ಕುಂಟೋಜಿಯಲ್ಲಿ ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಅಸುನೀಗಿದ ವಿಷಯ ತಿಳಿದು ಗ್ರಾಮದ ಅವರ ಮನೆಗೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ,ಗ್ರಾಮ ಲೆಕ್ಕಾಧಿಕಾರಿ ಅನುಪಮಾ ಪೂಜಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.ಈ ವೇಳೆ ಮಾತನಾಡಿದ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಮುಖಂಡ ಬಸವರಾಜ ಹುಲಗಣ್ಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net