ಸರಣಿ ಅಪಘಾತದಲ್ಲಿ ನಾಲ್ವರ ದುರ್ಮರಣ

h6-accident
Published on

ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪುಣೆ-ಬೆಂಗಳೂರು ಮಧ್ಯದ ರಾಷ್ಟ್ರೀಯ ಹೆದ್ದಾರಿಯ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಸಂಭವಿಸಿದೆ.
ಹಾಸನ ಜಿಲ್ಲೆ ಅರಕಲಗೂಡಿನ ಮಣಿಕಂಠ (26), ಪವನ (23), ಚಂದನ (31), ಬೆಂಗಳೂರಿನ ಹರೀಶಕುಮಾರ (34)ಮೃತರು. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಅರಕಲಗೂಡಿನವರು ಗೋವಾಕ್ಕೆ ತೆರಳುತ್ತಿದ್ದರೆ, ಹರೀಶಕುಮಾರ ಅವರು ಶಿರಡಿಗೆ ಹೊರಟಿದ್ದರು. ಒಂದರ ಹಿಂದೆ ಮತ್ತೊಂದು ಹೊರಟಿದ್ದ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದೆ.
ಎಸ್‌ಪಿ ಭೇಟಿ: ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net