

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಮಹಾವಿದ್ಯಾಲಯಗಳ ನಾಲ್ವರು ಪ್ರಾಚಾರ್ಯರನ್ನು ಸಿಂಡಿಕೇಟ್ ಸಭೆಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಡಿ. ಒಕ್ಕುಂದ, ನವಲಗುಂದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಬಿ. ಬಾಗಡಿ, ಬಾಡ- ಕಾರವಾರದ ಶಿವಾಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಎ.ಎಂ. ನಾಯ್ಕ, ಹುಬ್ಬಳ್ಳಿಯ ಕೆಎಲ್‌ಇಎಸ್ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಲ್.ಡಿ. ಹೊರಕೇರಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಕುಲಸಚಿವ ಎ. ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.