ನಾಲ್ವರಿಗೆ 4 ವರ್ಷ ಕಾರಾಗೃಹ ಶಿಕ್ಷೆ

Published on

ಸಿಂಧನೂರು: ತಾಲೂಕಿನ ಸೋಮಲಾಪುರ ಗ್ರಾಮದ ಗೃಹಿಣಿ ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ 4 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ 15 ಸಾವಿರ ರೂ. ದಂಡ ವಿಧಿಸಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಬಿ.ಬಿ.ಜಕಾತಿ ತೀರ್ಪು ನೀಡಿದ್ದಾರೆ.

ನಿರುಪಾದಿ ಹಾಗೂ ಆತನ ತಾಯಿ ಮತ್ತು ಸಹೋದರರು, ನಿರುಪಾದಿಯ ಪತ್ನಿ ರೇಣುಕಾ ಚಂದವಿಲ್ಲ. ಸರಿಯಾಗಿ ಕೆಲಸ ಮಾಡಲು ಬರುವುದಿಲ್ಲ. ಮಕ್ಕಳಾಗುವುದಿಲ್ಲ ಎಂದು ಹಿಂಸೆ ನೀಡಿದ್ದರಿಂದ ಮನನೊಂದ ಗೃಹಿಣಿ 2021ರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿತರ ವಿರುದ್ಧ ತನಿಖಾಧಿಕಾರಿ ಪಿಎಸ್‌ಐ ಯರಿಯಪ್ಪ, ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಆರ್.ಎ.ಗಡಕರಿ ವಾದ ಮಂಡಿಸಿದ್ದು, ಪಿಸಿ ರವಿಕುಮಾರ ನ್ಯಾಯಾಲಯಕ್ಕೆ ಸೂಕ್ತ ಸಮಯದಲ್ಲಿ ಸಾಕ್ಷಿದಾರರನ್ನು ಹಾಜರುಪಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net