

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯಡಾಡಿಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ವಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋವಾನ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ, 14 ವಯೋವಾನದೊಳಗಿನ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿನಿಯರಾದ ಹಂಸಿ ಮತ್ತು ಗಹನ ಆರ್.ಕುಲಾಲ್ ಹಾಗೂ 17ರ ವಯೋವಾನದೊಳಗಿನ ವಿಭಾಗದಲ್ಲಿ 9ನೇ ತರಗತಿಯ ವಿನಯ್ ಸಿ.ಎಸ್. ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುವಾರ್ ವಿದ್ಯಾರ್ಥಿಗಳಿಗೆ ವಾರ್ಗದರ್ಶನ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆ ಮುಖ್ಯ ಶಿಕ್ಷಕ ಪ್ರದೀಪ್ ಕೆ. ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.