

ಕೊಕ್ಕರ್ಣೆ: ಯಡ್ತಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬ್ರಹ್ಮಾವರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಸುಮಂತ್ ಎತ್ತರ ಜಿಗಿತದಲ್ಲಿ ಪ್ರಥಮ, ರಂಜಿತ್ 600 ಮೀಟರ್ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರೀತಂ ದ್ವಿತೀಯ, ನವಮಿ ಉದ್ದ ಜಿಗಿತದಲ್ಲಿ ತೃತೀಯ ಬಹುವಾನ ಪಡೆದಿದ್ದಾರೆ.