

Vijayavani : ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ನ 2024ನೇ ಸಾಲಿನ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದ್ದು, ವಿಜಯವಾಣಿಯ ಡಿಜಿಟಲ್ ವಿಭಾಗದ ಸಂಪಾದಕರಾದ ಸಿದ್ದು ಕಾಳೋಜಿ ಅವರು ಮಾಧ್ಯಮ ಅಕಾಡೆಮಿಯ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ಹಾಗೂ ಬೆಂಗಳೂರು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಸ್ಥಾನಿಕ ಸಂಪಾದಕ ಪ್ರಕಾಶ್ ಶೇಟ್, ದಾವಣಗೆರೆ ಜಿಲ್ಲಾ ವಿಶೇಷ ವರದಿಗಾರ ರಮೇಶ್ ಜಹಗೀರದಾರ್ ಅವರಿಗೆ ಮಾಧ್ಯಮ ಅಕಾಡೆಮಿ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ಲಭಿಸಿದೆ. ತುಮಕೂರಿನ ಹಿರಿಯ ವರದಿಗಾರ ಜಗನ್ನಾಥ್ ಕಾಳೇನಹಳ್ಳಿ ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ದೊರಕಿದೆ.
ಒಟ್ಟು 30 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ಮತ್ತು 10 ಪತ್ರಕರ್ತರಿಗೆ ವಿವಿಧ ದತ್ತಿ ಪ್ರಶಸ್ತಿಗಳು ಲಭಿಸಿದೆ. 50 ಪತ್ರಕರ್ತರಿಗೆ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ನೀಡಲಾಗಿದೆ.