ಬಳ್ಳಾರಿ : ತಾಲೂಕಿನ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅಪರಿಚಿತನೊಬ್ಬ ಅತ್ಯಾಚಾರ ಎಸಗಿದ ಪ್ರಕರಣದಡಿ ಫೋಕ್ಸೋ ಪ್ರಕರಣ ಸೋಮವಾರ ದಾಖಲಾಗಿದೆ. ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ಎಸಗಿದ್ದಾನೆ. ಸದ್ಯ ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ. ಮಗುವನ್ನು ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದವು. ಈ ಕುರಿತು ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.