ವಂಚನೆ ಪ್ರಕರಣ ಸಿಐಡಿಗೆ ಹಸ್ತಾಂತರ

Crime
Published on

ಮಂಡ್ಯ: ಅಧಿಕ ಬಡ್ಡಿ ಹಣದ ಆಸೆ ತೋರಿಸಿ ಕೋಟ್ಯಂತರ ರೂ ಮೌಲ್ಯದ ಹಣ ಹಾಗೂ ಚಿನ್ನಾಭರಣ ವಂಚನೆ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಪತ್ರ ವ್ಯವಹಾರ ಮಾಡಲಾಗುತ್ತಿದೆ. ಬಹುಕೋಟಿ ಕೋಟಿ ರೂ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ತನಿಖೆಯ ವ್ಯಾಪ್ತಿಯ ವಿಸ್ತಾರಗೊಳ್ಳುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯ ಅವಶ್ಯಕವಿರುವುದರಿಂದ ಸಿಐಡಿಗೆ ವಹಿಸಲು ಪತ್ರ ಬರೆಯಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಗರದ ಗುತ್ತಲು ಬಡಾವಣೆಯ ಸೋಮಶೇಖರ್ ಎಂಬಾತನನ್ನು ಬಂಧಿಸಲಾಗಿದ್ದು, ಎರಡು ಕಾಲು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net