ಹಣಕಾಸು ಸಂಸ್ಥೆಗಳಿಂದ ವಂಚನೆ : ಸಂತ್ರಸ್ತರಿಂದ ಮೈಸೂರಿನಲ್ಲಿ ಪ್ರತಿಭಟನೆ

Fraud by Financial Institutions Victims protest in Mysore
Published on

ಮೈಸೂರು: ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳಗಾದ ಸಂತ್ರಸ್ತರು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದೇವೆ. ಈ ಬಗ್ಗೆ ತನಿಖೆ ನಡೆಸಿ ನಮಗೆ ಹಣ ವಾಪಾಸ್ ಕೊಡಿಸಿ ಕೊಡಿ ಎಂದು ಸಂತ್ರಸ್ತರು ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಅಪ್ಪಾ ಸಾಹೇಬ್ ಎಂ.ಬುಗಡೆ, ಪಿ.ಅಲ್ಲಾ ಬಕ್ಷ್, ಎಚ್.ಎಸ್. ಮೃತ್ಯುಂಜಯ, ವೆಂಕಟರಾಮು, ಸಿ.ಸೋಮಣ್ಣ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net