ಇನ್‌ಸ್ಟಾಗ್ರಾಂ ಖಾತೆಯಲ್ಲಿ ದ್ವಿಚಕ್ರ ವಾಹನ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿ 51,300 ರೂ. ವಂಚನೆ!

instagram-blackmail-2
Published on

ಮಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ದ್ವಿಚಕ್ರ ವಾಹನ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿ ಬಳಿಕ ಹಂತ ಹಂತವಾಗಿ ಗೂಗಲ್ ಪೇ ಮೂಲಕ 51,300 ರೂ. ಪಡೆದು ವಂಚಿಸಿದ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀನಿವಾಸ್ ಎಂಬಾತ ದ್ವಿಚಕ್ರ ವಾಹನ ಮಾರಾಟಕ್ಕಿದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ. ಆತ 18 ಸಾವಿರ ರೂ. ನೀಡುವಂತೆ ಒಪ್ಪಂದ ಮಾಡಿಕೊಂಡಿದ್ದ. ಆರ್.ಸಿ ವರ್ಗಾಯಿಸಲು ಮುಂಗಡವಾಗಿ 3 ಸಾವಿರ ರೂ. ಕೇಳಿದ್ದ. ಆ ಬಳಿಕ ಹಲವು ಬಾರಿ ಕರೆ ಮಾಡಿ ಹಂತ ಹಂತವಾಗಿ ಒಟ್ಟು 51,300 ರೂ. ಪಡೆದು ವಂಚನೆ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net