

ಮೈಸೂರು: ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ವಕೀಲನನ್ನು ಬುಧವಾರ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಗರದ ನಿವಾಸಿ ವಕೀಲ ಬೆಂಕಿ ಚಿದಾನಂದ ಬಂಧಿತ ವ್ಯಕ್ತಿ. ಬೆಂಕಿ ಚಿದಾನಂದ ಲಷ್ಕರ್ ಮೊಹಲ್ಲಾದ ಕೆ.ರಾಘು ಅವರಿಂದ 2012ರಲ್ಲಿ 20 ಸಾವಿರ ರೂ. ಸಾಲ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ 20 ಸಾವಿರ ರೂ. ಮೊತ್ತದ ಚೆಕ್‌ವೊಂದನ್ನು ನೀಡಿದ್ದರು. ಆದರೆ, ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಆದರೆ, ನಂತರ ಸಾಲ ಮರುಪಾವತಿಸಲು ಬೆಂಕಿ ಚಿದಾನಂದ ಹೆಚ್ಚಿನ ಆಸಕ್ತಿ ತೋರಲಿಲ್ಲ. ಒತ್ತಾಯ ಾಡಿದ ಸಂದರ್ಭದಲ್ಲಿ ಕೊಲೆ ಬೆದರಿಕೆಯೊಡ್ಡಿದ.
ವಿಚಾರಣೆ ನಡೆಸಿದ ನ್ಯಾಯಾಲಯ ಚಿದಾನಂದಗೆ 3 ವರ್ಷಹ ಶಿಕ್ಷೆ ವಿಧಿಸಿತ್ತು. ಚಿದಾನಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೆಳ ನ್ಯಾಯಾಲಯದ ಆದೇಶ ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅಪರಾಧಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.