ಹೂಡಿಕೆ ಹೆಸರಿನಲ್ಲಿ ವಂಚನೆ

cybe crime
Published on

ಹುಬ್ಬಳ್ಳಿ: ಹೂಡಿಕೆಯಿಂದ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿಸಿದ ಅಪರಿಚಿತನೊಬ್ಬ ಸಮೀಪದ ಗಾಮನಗಟ್ಟಿಯ ಶಿವಾನಂದ ಎಂಬುವವರಿಂದ 5.76 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಮೊಬೈಲ್ ಫೋನ್‌ನಲ್ಲಿ ಫೇಸ್‌ಬುಕ್ ಬಳಸುವಾಗ ಬಂದ ಹಣ ಹೂಡಿಕೆಯ ಜಾಹೀರಾತು ಗಮನಿಸಿ, ಅದರಲ್ಲಿದ್ದ ಮೊಬೈಲ್ ಫೋನ್ ಸಂಖ್ಯೆಗೆ ಶಿವಾನಂದ ಕರೆ ಮಾಡಿದಾಗ, ಅಪರಿಚಿತ ವ್ಯಕ್ತಿಯು ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸುವಂತೆ ತಿಳಿಸಿ ಟೆಲಿಗ್ರಾಂ ಐಡಿಗೆ ಸೇರಿಸಿದ್ದಾನೆ. ಈ ವೇಳೆ 800 ರೂ. ಪಡೆದು, ಲಾಭ ಎಂದು 1,040 ರೂ. ಮರಳಿಸಿದ್ದಾನೆ. ಹೀಗೆ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗಲಿದೆ ಎಂದು ನಂಬಿಸಿ ಹಂತ ಹಂತವಾಗಿ 5.76 ಲಕ್ಷ ರೂ. ವರ್ಗಾಯಿಸಿಕೊಂಡು ಮರಳಿಸದೆ ವಂಚಿಸಿದ್ದಾನೆ ಎಂದು ಸಿಇಎನ್ ಕ್ರೈಂ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net