ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಉಡುಪಿ ವಕೀಲನ ವಿರುದ್ಧ ಕೇಸು ದಾಖಲು

rape on napali
Published on

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಕೋಟ, ಕಾವಡಿ ನಿವಾಸಿ, ಉಡುಪಿಯ ವಕೀಲ ಸುಕುಮಾರ್ ಶೆಟ್ಟಿ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ವಕೀಲ ತಲೆಮರೆಸಿಕೊಂಡಿದ್ದಾನೆ. ಅದೇ ಗ್ರಾಮದಲ್ಲಿ ವಾಸವಿರುವ ಸ್ನೇಹಿತನ ಸಹೋದರಿ 25 ವರ್ಷದ ಯುವತಿ ಕೆಲವು ವರ್ಷದ ಹಿಂದೆ ಪರಿಚಯವಾಗಿದ್ದು, ಆರೋಪಿ ಮದುವೆಯಾಗುವುದಾಗಿ ನಂಬಿಸಿ ಐದು ವರ್ಷಗಳಿಂದ ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಯುವತಿ ಗರ್ಭವತಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಮದುವೆ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಹಲ್ಲೆ ನಡೆಸಿ, ಮದುವೆಯಾಗಲು ನಿರಾಕರಿಸಿ ವಂಚಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತನಿಖೆ ಕೈಗೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಹಿಳಾ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net