

ಹಾವೇರಿ: ಗ್ರಾಮೀಣ ಸಹಕಾರ ಸಂಘದ ಹೆಸರಿನಲ್ಲಿ ಹಣ ತೆಗೆದುಕೊಂಡು ಸಂಘಕ್ಕೆ ಕೊಡದೆ ವಂಚಿಸಿರುವ ಬ್ಯಾಂಕ್ ವ್ಯವಸ್ಥಾಪಕನ ವಿರುದ್ಧ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಖಾಸಗಿ ಬ್ಯಾಂಕ್ನ ವ್ಯವಸ್ಥಾಪಕ ಹಾಗೂ ಸವಣೂರ ತಾಲೂಲಿನ ಹೊಂಡದಕಟ್ಟಿ ಗ್ರಾಮದ ರಾಜಶೇಖರ ಶಿವಾನಂದ ಹೊಂಡದಕಟ್ಟಿ ಎಂಬುವನ ವಿರುದ್ಧ ಪ್ರಕರಣ ದಾಖಲಾಗಿರುವುದು.
ಈತ ಖಾಸಗಿ ಬ್ಯಾಂಕ್ನ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಸವಣೂರಿನ ಸಹಕಾರ ಸಂಘದ ಹೆಸರಿನಲ್ಲಿ 68 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಅವರ ಸಂಘಕ್ಕೆ ಕೊಡದೆ ವಂಚಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.