ಬಸವಮಾರ್ಗ ಫೌಂಡೇಶನ್ ವತಿಯಿಂದ ಡಿ.6 ರಿಂದ 15 ರವರೆಗೆ ಕುಡಿತ ಬಿಡಿಸುವ ಉಚಿತ ಶಿಬಿರ

alcohol ban
Published on

ಮೈಸೂರು: ಬಸವಮಾರ್ಗ ಫೌಂಡೇಷನ್ ವತಿಯಿಂದ ನಗರದ ಹೆಬ್ಬಾಳದ ಫೌಂಡೇಷನ್‌ನಲ್ಲಿ 45ನೇ 10 ದಿನಗಳ ಕುಡಿತ ಬಿಡಿಸುವ ಉಚಿತ ಶಿಬಿರವನ್ನು ಆಯೋಜಿಸಲಾಗಿದೆ.

ಡಿ.6ರಿಂದ ಆರಂಭಗೊಳ್ಳುವ ಶಿಬಿರವು ಡಿ.15ರವರೆಗೆ ನಡೆಯಲಿದೆ. ಶಿಬಿರ ಉದ್ಘಾಟನಾ ಕಾರ್ಯಕ್ರಮವು ಡಿ.8ರಂದು ಸಂ.5 ಗಂಟೆಗೆ ನಡೆಯಲಿದೆ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಾಕುಮಾರಿ ಸಂಧ್ಯಾ ಅವರ ಸಾನ್ನಿಧ್ಯದಲ್ಲಿ ಗಣ್ಯರು ಉದ್ಘಾಟಿಸಲಿದ್ದಾರೆ.

ಜಿಎಸ್‌ಎಸ್ ಯೋಗ ಕೇಂದ್ರದ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್ ಭಾಗವಹಿಸಲಿದ್ದಾರೆ. ಬಸವಮಾರ್ಗ ಫೌಂಡೇಷನ್ ಸಂಸ್ಥಾಪಕ ಬಸವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net