

ಕುಂದಾಪುರ: ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘದ ಅಧ್ಯಕ್ಷ ವಕ್ವಾಡಿ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಪ್ರೇಮಾ ಮತ್ತು ಮಂಜುನಾಥ ಶೆಟ್ಟಿಗಾರ್ ಮತ್ತು ಮಕ್ಕಳು ಕೋಟೇಶ್ವರ ವಲಯದ 87ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಿದರು.
ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ, ವಾಸ್ತುತಜ್ಞ ಡಾ.ಬಸವರಾಜ್ ಶೆಟ್ಟಿಗಾರ್, ಕಾರ್ಯದರ್ಶಿ ಸುರೇಶ್ ಶೆಟ್ಟಿಗಾರ್, ನಿವೃತ್ತ ಎಎಸ್‌ಐ ಗಣಪಯ್ಯ ಶೆಟ್ಟಿಗಾರ್, ಮಾಜಿ ಅಧ್ಯಕ್ಷ ವಕ್ವಾಡಿ ಜನಾರ್ದನ ಶೆಟ್ಟಿಗಾರ್, ಮಾಜಿ ಕೋಶಾಧಿಕಾರಿ ಕೃಷ್ಣಮೂರ್ತಿ ಶೆಟ್ಟಿಗಾರ್, ಗುರಿಕಾರರಾದ ಗೋಪಾಲ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಇಂದಿರಾ ಗೋಪಾಡಿ ಸ್ವಾಗತಿಸಿದರು. ಉಷಾ ರವೀಂದ್ರ ಶೆಟ್ಟಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಪ್ರಮೋದ್ ಶೆಟ್ಟಿಗಾರ್ ವರದಿ ವಾಚಿಸಿದರು. ಮಾಜಿ ಕಾರ್ಯದರ್ಶಿ ವೆಂಕಟೇಶ ಶೆಟ್ಟಿಗಾರ್ ವಂದಿಸಿದರು.