ಮೇ 31ರಂದು ಉಚಿತ ಕ್ಯಾನ್ಸರ್ ಆರೋಗ್ಯ ತಪಾಸಣೆ

raichur
raichur
Published on

ರಾಯಚೂರು ನಗರದ ಬೆಟ್ಟದೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ 31 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ಹೆಚ್‌ಸಿಜಿ ಕ್ಯಾನ್ಸರ್ ಸೆಂಟರ್ ಹಾಗೂ ಬೆಟ್ಟದೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕ್ಯಾನ್ಸರ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಜಯಪ್ರಕಾಶ ಪಾಟೀಲ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಲ್ಲಿ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ತಂಬಾಕು ಪದಾರ್ಥಗಳನ್ನು ಬಳಸುವವರಲ್ಲಿ ಬಾಯಿಯ ಕ್ಯಾನ್ಸರ್, ಗಂಟಲು ಕ್ಯಾನ್ಸರ್ ಪ್ರಕರಣಗಳನ್ನೂ ಕಾಣಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರಿಗೂ ಕ್ಯಾನ್ಸರ್ ತಪಾಸಣೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ ಕ್ಯಾನ್ಸರ್ ಮಾತ್ರವಲ್ಲದೇ ಬಿಪಿ, ಶುಗರ್ ತಪಾಸಣೆಯನ್ನೂ ಮಾಡಲಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಕ್ಕೆ ಆಗಮಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಕೊಂಡು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಹೆಚ್‌ಸಿಜಿ ಆಸ್ಪತ್ರೆಯ ದಿಲೀಪ್ ಕುಮಾರ್, ಶಿಬಿರದ ಆಯೋಜಕ ರಮೇಶ ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net