ಸಿಪೆಟ್ ನಿಂದ ಉಚಿತ ವೃತ್ತಿ ಮಾರ್ಗದರ್ಶನ

Published on

ಮೈಸೂರು: ನಗರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ ಮತ್ತು ತಾಂತ್ರಿಕ ತರಬೇತಿ ಕೇಂದ್ರದಿಂದ ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದವರಿಗೂ ಉಚಿತ ವೃತ್ತಿ ಮಾರ್ಗದರ್ಶನ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ವಿದ್ಯಾರ್ಥಿಗಳು ಈ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕ ಮತ್ತು ಮುಖ್ಯಸ್ಥ ಶ್ರೀಕಾಂತ್ ಶಿರಾಲಿ ತಿಳಿಸಿದ್ದಾರೆ.

ಮಾಹಿತಿಗೆ 0821-2510618 ಅಥವಾ 9480253024 /9791431827 ಸಂಪರ್ಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net