

ಮಂಗಳೂರು : ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25ಕೊನೆಯ ದಿನ.
ಅರ್ಹ ಗ್ರಾಮೀಣ ರೈತ ಮಹಿಳೆಯರು ಆಯಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯ ಅಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.