ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Published on

ಮೈಸೂರು: ರಾಜ್ಯ ಸರ್ಕಾರ ನಡೆಸಲಿರುವ ಗ್ರಾಮ ಆಡಳಿತ ಅಧಿಕಾರಿ (ವಿಎಒ) ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರೀಕ್ಷೆಗಳಿಗೆ ಜ್ಞಾನಬುತ್ತಿ ಸಂಸ್ಥೆಯಿಂದ ಉಚಿತ ತರಬೇತಿ ನೀಡಲಾಗುವುದು.
ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ಮೇ 8ರಿಂದ 45 ದಿನಗಳತನಕ ನಿತ್ಯ ಸಂಜೆ 5.30ರಿಂದ 7.30ರವರೆಗೆ ತರಬೇತಿ ನೀಡಲಾಗುವುದು. ಆಸಕ್ತರು ಸಂಯೋಜಕರಾದ ಸಿ.ಕೆ. ಕಿರಣ್‌ಕೌಶಿಕ್(9972830857) ಅಥವಾ ಕೆ.ವೈ ನಾಗೇಂದ್ರ(8296788251) ಅವರನ್ನು ಸಂಪರ್ಕಿಸಲು ಸಂಸ್ಥೆ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net