ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Published on

ಮೈಸೂರು: ಜ್ಞಾನಬುತ್ತಿ ಸಂಸ್ಥೆಯಿಂದ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(ಎಸ್‌ಎಸ್‌ಸಿ) ನಡೆಸುವ ವಿವಿಧ ಹಂತದ ಪರೀಕ್ಷೆಗಳಿಗೆ ಹಾಗೂ ಐಬಿಪಿಎಸ್ ನಡೆಸಲಿರುವ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಉಚಿತ ತರಬೇತಿ ನೀಡಲಾಗುವುದು.
ಆಸಕ್ತರು ಆ.17ರ ಒಳಗೆ ಪ್ರತಿದಿನ ಸಂಜೆ 5.30 ರಿಂದ 7.30ರ ಅವಧಿಯಲ್ಲಿ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಸಂಯೋಜಕರಾದ ಸಿ.ಕೆ.ಕಿರಣ್ ಕೌಶಿಕ್ (9972830857) ಅಥವಾ ಕೆ.ವೈ.ನಾಗೇಂದ್ರ (8296788251) ಅವರನ್ನು ಸಂಪರ್ಕಿಸುವಂತೆ ಸಂಸ್ಥೆ ಕಾರ್ಯದರ್ಶಿ ಎಚ್.ಬಾಲಕೃಷ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net