ನೀಟ್‌ಗೆ ಸರ್ಕಾರದಿಂದಲೇ ಉಚಿತ ತರಬೇತಿ: ಸಚಿವ ಮಧು ಬಂಗಾರಪ್ಪ

minister madhu bangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ನೀಟ್‌ಗೆ ಸಂಬಂಧಿಸಿದಂತೆ ರಾಜ್ಯದ ಆಯ್ದ ಕಾಲೇಜುಗಳಲ್ಲಿ ಸರ್ಕಾರದಿಂದಲೇ ಉಚಿತ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಪ್ರಸ್ತುತ ನೀಟ್ ಪರೀಕ್ಷೆ ಫಲಿತಾಂಶ ಹೊರಬಿದ್ದ ಬಳಿಕ ಸಾಕಷ್ಟು ಅನುಮಾನ ಮತ್ತು ಗೊಂದಲಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ಮರು ಪರೀಕ್ಷೆ ನಿಗದಿ ಮಾಡಿರುವುದರಿಂದ ರಾಜ್ಯ ಸರ್ಕಾರವೇ ನುರಿತ ಉಪನ್ಯಾಸಕರಿಂದ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೀಟ್ ಪರೀಕ್ಷೆಯಲ್ಲಿ ಆಗಿರುವ ಅದ್ವಾನದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ರೀತಿಯ ಗೊಂದಲಗಳಿಗೆ ಇತಿಶ್ರೀ ಹಾಡಬೇಕಿದೆ. ನೀಟ್ ವ್ಯವಸ್ಥೆಯ ಬಗ್ಗೆಯೇ ಕೂಲಂಕಷ ಚರ್ಚೆಯಾಗಬೇಕಿದೆ. ವೃತ್ತಿಪರ ಕೋರ್ಸ್‌ಗಳಿಗೆ ಎಲ್ಲ ಮೂಲಸೌಕರ್ಯ ನೀಡುವುದು ರಾಜ್ಯ ಸರ್ಕಾರಗಳಾಗಿವೆ. ಆದರೆ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಾಮಮಾರ್ಗದಲ್ಲಿ ಸೀಟ್ ಪಡೆಯುವುದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ ಎಂದರು.
ತಮಿಳುನಾಡು ಸರ್ಕಾರ ಈ ಬಗ್ಗೆ ಮೊದಲಿಂದಲೂ ಧ್ವನಿ ಎತ್ತಿದೆ. ನಮ್ಮ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೂ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವೈಫಲ್ಯವನ್ನು ನಾವು ಖಂಡಿಸುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net