ಯುಪಿಎಸ್‌ಸಿ ಪರೀಕ್ಷೆಗೆ ಉಚಿತ ತರಬೇತಿ: ಅರ್ಜಿ ಆಹ್ವಾನ

NAGENDRA PRASAD
Published on

ಮಡಿಕೇರಿ: ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ ೬ನೇ ಬ್ಯಾಚ್‌ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್‌ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ೫ ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ ೨೦೨೫ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.


ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ೨೦೨೫ರಲ್ಲಿ ಪರೀಕ್ಷೆ ಬರೆಯುವ ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಎಲ್ಲಾ ತರಗತಿಗಳು ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ ನಿಮಯಮಾನುಸಾರ ಪ್ರವೇಶ ಪಡೆಯಲು ಅವಕಾಶವಿದೆ. ಪ್ರವೇಶಾಸಕ್ತ ವಿದ್ಯಾರ್ಥಿಗಳು ವಾಸವಿ ಅಕಾಡೆಮಿಯು ನಡೆಸುವ ಪ್ರವೇಶ ಮತ್ತು ಮೌಖಿಕ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತೀರ್ಣರಾಗಬೇಕಿದೆ.


ತರಬೇತಿಯ ಅವಧಿ ೮ ತಿಂಗಳಾಗಿದ್ದು, ಅರ್ಜಿ ಸಲ್ಲಿಸಲು ೨೦೨೪ ಆ.೨೫ ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ೨೦೨೪ ಸೆ.೧ ರಂದು ನಡೆಯಲಿದೆ. ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ವಾಸವಿ ಅಕಾಡೆಮಿ ನಡೆಸುವ ತರಗತಿಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೪೪೮೦೭೪೫೨೮, ೯೯೧೬೧೧೬೬೧೫ ನ್ನು ಸಂಪರ್ಕಿಸಬಹುದಾಗಿದೆ. ಯಾವುದೇ ಸಮುದಾಯದ ಮಧ್ಯಮ ಹಾಗೂ ಬಡ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ತರಬೇತಿ ಪಡೆಯಬಹುದಾಗಿದೆ ಎಂದು ಬಿ.ಆರ್.ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net