

ಹಾನಗಲ್ಲ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ತೋರಬೇಕು ಎನ್ನುವ ಉದ್ದೇಶದಿಂದ ಕಳೆದ ವರ್ಷ 70 ವಿದ್ಯಾರ್ಥಿಗಳಿಗೆ ಧಾರವಾಡದಲ್ಲಿ ತರಬೇತಿ ನೀಡಲಾಗಿತ್ತು. ಪ್ರಸಕ್ತ ವರ್ಷ ಹಾನಗಲ್ಲಿನಲ್ಲಿಯೇ ತರಬೇತಿ ಕೇಂದ್ರ ತೆರೆದು ಉಚಿತ ತರಬೇತಿ ನೀಡುವ ಉದ್ದೇಶವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಿವೃತ್ತ ಪ್ರಾಚಾರ್ಯ ಡಾ.ಎಚ್.ಬಿ. ಪಂಚಾಕ್ಷರಯ್ಯ ಮಾತನಾಡಿದರು.
ಅಗ್ನಿವೀರರಾಗಿ ಆಯ್ಕೆಯಾಗಿರುವ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ ಭಾವಿಮನಿ, ಶಿವರಾಜ ಡಬ್ಬಣ್ಣನವರ ಅವರನ್ನು ಶಾಸಕ ಮಾನೆ ಸನ್ಮಾನಿಸಿದರು. ಪ್ರಾಚಾರ್ಯ ಡಾ.ವಿ.ಎಂ. ಕುಮ್ಮೂರ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ನಿವೇಶನ ದಾನಿ ಸದಾಶಿವ ಬೆಲ್ಲದ, ಗ್ರಾಪಂ ಅಧ್ಯಕ್ಷ ಮಕ್ಬೂಲ್‌ಅಹ್ಮದ್ ರುಸ್ತುಂಖಾನವರ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಹಾನಗಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ತಾಪಂ ಮಾಜಿ ಅಧ್ಯಕ್ಷ ಎಲ್.ಕೆ. ಶೇಷಗಿರಿ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಹಾನಗಲ್ಲ ಪುರಸಭೆ ಮಾಜಿ ಅಧ್ಯಕ್ಷ ಅನಂತವಿಕಾಸ ನಿಂಗೋಜಿ ಇತರರು ಉಪಸ್ಥಿತರಿದ್ದರು