ಉಚಿತ ಕಂಪ್ಯೂಟರ್ ಶಿಕ್ಷಣ

C
Published on

ಬೆಂಗಳೂರು: ಕೆನರಾ ಬ್ಯಾಂಕ್ ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಶನ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಅಡ್ಮಿನಿಸ್ಟ್ರೇಶನಲ್ಲಿ ಜ. 1ರಿಂದ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣ ನೀಡಲಿದೆ.

ಅಭ್ಯರ್ಥಿಗಳು ಕನಿಷ್ಟ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪಿಯುಸಿ, ಪದವಿ, ಡಿಪ್ಲೊಮಾ ಹೊಂದಿದವವರಿಗೆ ಆದ್ಯತೆ. ವಯಸ್ಸು ಕನಿಷ್ಟ 18 ರಿಂದ 27 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ /ವರ್ಗದವರಿಗೆ ಗರಿಷ್ಟ ವಯಸ್ಸು 30 ಆಗಿರುತ್ತದೆ. ಆಸಕ್ತರು ಪ್ರತಿದಿನ ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರದ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ನಡೆಯಲಿರುವ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ವಿವರಗಳಿಗೆ : ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರಂ, ಬೆಂಗಳೂರು. ದೂ : 23440036 / 23463580 / 94485 38107 ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net