

ಬೆಂಗಳೂರು : ಕೆನರಾ ಬ್ಯಾಂಕ್‌ನಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಶನ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಅಡ್ಮಿನಿಸ್ಟ್ರೇಶನಲ್ಲಿ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು ನೀಡಲಿದೆ. ಕಂಪ್ಯೂಟರ್ ತರಬೇತಿಯು ಜು.1 ರಿಂದ ಪ್ರಾರಂಭವಾಗಲಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‌ಎಸ್‌ಎಲ್ಸಿ ಪಾಸಾಗಿರಬೇಕು. ಪಿಯುಸಿ, ಡಿಗ್ರಿ, ಡಿಪ್ಲೊಮಾ ಹೊಂದಿದವವರಿಗೆ ಆದ್ಯತೆ. ವಯಸ್ಸು ಕನಿಷ್ಟ 18 ರಿಂದ 27 ವರ್ಷದೊಳಗಿರಬೇಕು. ಪ.ಜಾ., ಪ.ಪಂ.ದವರಿಗೆ ಗರಿಷ್ಟ ವಯಸ್ಸು 30 ವರ್ಷ.
ತರಬೇತಿಗೆ ಸೇರಲಿಚ್ಛಿಸುವವರು ನೇರಸಂದರ್ಶನಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು. ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲ್ಲಿದ್ದು, ಅರ್ಜಿಯನ್ನು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪಡೆಯಬಹುದು.
ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರಂ, ಬೆಂಗಳೂರು. ದೂ: 94485 38107 ಸಂಪರ್ಕಿಸಬಹುದು.