ಡಿಟಿಪಿ, ಗ್ರಾಫಿಕ್ ಡಿಸೈನಿಂಗ್ ಕುರಿತು ಉಚಿತ ತರಬೇತಿ: ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಧ್ಯತೆ

Free computer training
Published on

ಮಂಡ್ಯ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತು 45 ದಿನದ ಉಚಿತ ತರಬೇತಿ ಜು.10ರಿಂದ ಆಯೋಜಿಸಲಾಗಿದೆ.

18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಹಾಗೂ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಸಕ್ತರು ಆಧಾರ್‌ಕಾರ್ಡ್ ಹೊಂದಿರಬೇಕು. ಬಿಪಿಎಲ್ ಕಾರ್ಡ್ ಇರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಜೂ.15ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.ಸಂ 9740982585 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಬೆಂಗಳೂರು ಶಾಖೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net