ತಲ್ಲೂರಿನಲ್ಲಿ ದಂತ ಉಚಿತ ಚಿಕಿತ್ಸಾ ಶಿಬಿರ

gan-8
Published on

ಕುಂದಾಪುರ: ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಶಾಖೆ, ರೋಟರಿ ಕ್ಲಬ್ ಕುಂದಾಪುರ, ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು, ದಂತ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ ಸಹಯೋಗದಲ್ಲಿ ತಲ್ಲೂರು ನಾರಾಯಣ ವಿಶೇಷ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ದಂತ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಭಾನುವಾರ ಜರುಗಿತು.

ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಅಧ್ಯಕ್ಷ ಡಾ.ಶಬರಿ ಶುಭಹಾರೈಸಿದರು. ಉಪಾಧ್ಯಕ್ಷ ಡಾ.ರಾಜಾರಾಂ ಶೆಟ್ಟಿ, ಕಾಲೇಜ್ ಆಫ್ ಡೆಂಟಲ್ ಸರ್ಜರಿ ಕೆಎಂಸಿ ಮಣಿಪಾಲ್‌ನ ಡಾ.ಶ್ರೇಯಾ, ರೋಟರಿ ಕ್ಲಬ್‌ನ ಸಚ್ಚಿದಾನಂದ, ತಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ಟಿ. ಉಪಸ್ಥಿತರಿದ್ದರು. ಪ್ರತಿಮಾ ಸ್ವಾಗತಿಸಿದರು. ದೀಪಾ ವಂದಿಸಿದರು. ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net